ನೆರೆ ಸಂತ್ರಸ್ತರ ಪರಿಹಾರ ನಿಧಿಗೆ 5 ಲಕ್ಷ ದೇಣಿಗೆ ನೀಡಿದ ನಟ ಉಪೇಂದ್ರ

ನೆರೆ ಸಂತ್ರಸ್ತರ ಪರಿಹಾರ ನಿಧಿಗೆ 5 ಲಕ್ಷ ದೇಣಿಗೆ ನೀಡಿದ ನಟ ಉಪೇಂದ್ರ

YK   ¦    Aug 22, 2019 05:45:19 PM (IST)
ನೆರೆ ಸಂತ್ರಸ್ತರ ಪರಿಹಾರ ನಿಧಿಗೆ 5 ಲಕ್ಷ ದೇಣಿಗೆ ನೀಡಿದ ನಟ ಉಪೇಂದ್ರ

ಬೆಂಗಳೂರು: ನಟ, ನಿರ್ದೇಶಕ ಉಪೇಂದ್ರ ಅವರು ಇಂದು ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ನೆರೆ ಸಂತ್ರಸ್ತರ ಪರಿಹಾರ ನಿಧಿಗೆ 5ಲಕ್ಷ ದೇಣಿಗೆ ನಿಡಿದ್ದಾರೆ.

ಚೆಕ್ ನ್ನು ಸ್ವೀಕರಿಸಿದ ಬಿ.ಎಸ್.ಯಡಿಯೂರಪ್ಪ ಅವರು ಟ್ವೀಟ್ ಮಾಡಿ, ‘ಖ್ಯಾತ ನಟ, ನಿರ್ದೇಶಕ ಉಪೇಂದ್ರ ಅವರು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5ಲಕ್ಷ ದೇಣಿಗೆ ನಿಡಿದ್ದಾರೆ’ ಎಂದು ಬರೆದುಕೊಂಡಿದ್ದಾರೆ.

ನಟ ಉಪೇಂದ್ರ ಟ್ವೀಟ್ ಮಾಡಿ, ‘ ಉತ್ತರ ಕರ್ನಾಟಕ ನೆರೆ ಸಂತ್ರಸ್ತರ ನೆರವಿಗಾಗಿ ಮುಖ್ಯಮಂತ್ರಿಗಳ ಪರಿಹಾರ ನೀಧಿಗೆ 5ಲಕ್ಷ ರೂಗಳನ್ನು ದೇಣಿಗೆಯಾಗಿ ನೀಡುತ್ತಿದ್ದೇನೆ. ತಾವುಗಳೂ ಪ್ರವಾಹಕ್ಕೆ ಸಿಲುಕಿರುವವ ನಮ್ಮವರಿಗೆ ನಿಮ್ಮ ಇಚ್ಛಾನುಸಾರ ನೆರವಾಗಬೇಕೆಂದು ಕೇಳಿಕೊಳ್ಳುತ್ತೇನೆ ಎಂದು ಬರೆದುಕೊಂಡಿದ್ದಾರೆ.