ಏಕದಿನ ರ‍್ಯಾಂಕಿಂಗ್: ಅಗ್ರಸ್ಥಾನ ಕಳಕೊಂಡ ವೇಗಿ ಬುಮ್ರಾ

ಏಕದಿನ ರ‍್ಯಾಂಕಿಂಗ್: ಅಗ್ರಸ್ಥಾನ ಕಳಕೊಂಡ ವೇಗಿ ಬುಮ್ರಾ

HSA   ¦    Feb 12, 2020 03:51:13 PM (IST)
ಏಕದಿನ ರ‍್ಯಾಂಕಿಂಗ್: ಅಗ್ರಸ್ಥಾನ ಕಳಕೊಂಡ ವೇಗಿ ಬುಮ್ರಾ

ನವದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್(ಐಸಿಸಿ) ಬುಧವಾರ ಬಿಡುಗಡೆ ಮಾಡಿರುವ ನೂತನ ಏಕದಿನ ರ‍್ಯಾಂಕಿಂಗ್ ನಲ್ಲಿ ಟೀಂ ಇಂಡಿಯಾದ ವೇಗಿ ಜಸ್ಪ್ರೀತ್ ಬುಮ್ರಾ ಅವರು ಅಗ್ರ ಸ್ಥಾನ ಕಳೆದುಕೊಂಡಿದ್ದಾರೆ.

ನ್ಯೂಜಿಲೆಂಡ್ ವಿರುದ್ಧದ ಮೂರು ಏಕದಿನ ಪಂದ್ಯಗಳಲ್ಲಿ ಬುಮ್ರಾ 30 ಓವರ್ ಎಸೆದಿದ್ದರೂ ಒಂದೂ ವಿಕೆಟ್ ಪಡೆದಿರಲಿಲ್ಲ. ಹೀಗಾಗಿ ಅವರು 45 ರೇಟಿಂಗ್ ಪಾಯಿಂಟ್ ಕಳಕೊಂಡು, ಒಂದು ಸ್ಥಾನ ಕುಸಿತಕ್ಕೆ ಒಳಗಾಗಿದ್ದಾರೆ.

ಕಿವೀಸ್ ವೇಗಿ ಟ್ರೆಂಟ್ ಬೌಲ್ಟ್(727) ಮೊದಲ ಸ್ಥಾನಕ್ಕೇರಿರುವರು. ಅಫ್ಘಾನಿಸ್ತಾನದ ಮುಜೀಬ್ ಉರ್ ರೆಹಮಾನ್(701), ದಕ್ಷಿಣ ಆಫ್ರಿಕಾದ ಕಗಿಸೊ ರಬಡ(675) ಹಾಗೂ ಆಸ್ಟ್ರೇಲಿಯಾದ ಪ್ಯಾಟ್ ಕಮಿನ್ಸ್(673) ಕ್ರಮವಾಗಿ ಮೂರು, ನಾಲ್ಕು ಮತ್ತು ಐದನೇ ಸ್ಥಾನ ಪಡೆದಿರುವರು.

ಬ್ಯಾಟಿಂಗ್ ವಿಭಾಗದಲ್ಲಿ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ 17 ಸ್ಥಾನ ಕಳೆದುಕೊಂಡರೂ ಅಗ್ರಸ್ಥಾನದಲ್ಲಿದ್ದಾರೆ. ಎರಡನೇ ಸ್ಥಾನದಲ್ಲಿರುವ ಟೀಂ ಇಂಡಿಯಾದ ಆರಂಭಿಕ ಆಟಗಾರ ರೋಹಿತ್ ಶರ್ಮಾ ಸರಣಿಯಲ್ಲಿ ಆಡದಿರುವುದೇ ಇದಕ್ಕೆ ಕಾರಣವಾಗಿದೆ.

ಕೊಹ್ಲಿ ಸರಣಿಯಲ್ಲಿ 51, 15 ಮತ್ತು 9 ರನ್ ಗಳಿಸಿದ್ದರು.